ಮಂಗಳೂರು, ಅ 25 (Daijiworld News/MSP): ಮುಂದೆ ನಡೆಯುವ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಯಾವ ಸ್ಥಿತಿಯಲ್ಲಿದೆ ಅನ್ನೋದು ಎಲ್ಲರಿಗೂ ತಿಳಿದಿದೆ ಹೀಗಾಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಎದುರಾಳಿಯೇ ಇರಲ್ಲ ಎಂದು ಅ.25ರ ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಅವಿಭಜಿತ ಜಿಲ್ಲೆಯ ಪ್ರವಾಸಕ್ಕಾಗಿ ಮಂಗಳೂರಿಗೆ ಬಂದಿಳಿದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದರು. ಮಹಾರಾಷ್ಟ್ರ ಚುನಾವಣೆಯಲ್ಲಿ ಅನರ್ಹರಿಗೆ ಸೋಲು ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಫಲಿತಾಂಶ ರಾಜ್ಯದಲ್ಲಿ ಎಫೆಕ್ಟ್ ಆಗಲ್ಲ ಎಂದು ಸ್ಪಷ್ಟಪಡಿಸಿದರು.
ಸರಕಾರದ ಬಳಿ ದುಡ್ಡಿಲ್ಲ ಎಂಬ ಸಚಿವ ಸಿಸಿ ಪಾಟೀಲ್ ಹೇಳಿಕೆಗೆ ಡಿಸಿಎಂ ಸಮರ್ಥಿಸಿ ಮಾತನಾಡಿ, ರಾಜ್ಯದಲ್ಲಿ 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರಕಾರ ಕೇವಲ 15 ಸಾವಿರ ಕೋಟಿಯಷ್ಟೇ ಕೊಟ್ಟಿದೆ ಈ ಬಾರಿ ನೆರೆಯೂ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ. ಹೀಗಾಗಿ ಹೊಸ ಯೋಜನೆ, ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಈ ಬಜೆಟಿನಲ್ಲಿ ಹಣ ಸಾಕಾಗಲ್ಲ ಎಂದು ಹೇಳಿದರು.
ಐಟಿ ದಾಳಿಯಲ್ಲಿ ಮೆಡಿಕಲ್ ಸೀಟು ಬ್ಲಾಕಿಂಗ್ ಪತ್ತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, "ರಾಜ್ಯದಲ್ಲಿ ಸೀಟ್ ಬ್ಲಾಕಿಂಗ್ ವಿಷ್ಯನೇ ಇಲ್ಲ,ಅಕ್ರಮ ಆಸ್ತಿ ವಿಚಾರದಲ್ಲಿ ಐಟಿಯವರು ರೈಡ್ ಮಾಡಿದ್ದಾರೆ. ಮೆರಿಟ್ ಸೀಟು ಭರ್ತಿಯಾಗದಿದ್ದರೆ ಭರ್ತಿ ಮಾಡಿಕೊಳ್ಳಲು ಅವಕಾಶವಿದೆ. ಸರಕಾರದ ಒಡಂಬಡಿಕೆ ಪ್ರಕಾರ ಸೀಟು ಭರ್ತಿ ಮಾಡಿಕೊಳ್ಳಬಹುದು ಎಂದರು.
ಸೀಟ್ ಬ್ಲಾಕಿಂಗ್ ವಿಚಾರವನ್ನು ಪರೋಕ್ಷವಾಗಿ ವೈದ್ಯಕೀಯ ಶಿಕ್ಷಣ ಸಚಿವ ಒಪ್ಪಿಕೊಂಡಿದ್ದರು. ಮಾಜಿ ಡಿಸಿಎಂ ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ವೇಳೆ ಬೆಂಗಳೂರಿನಲ್ಲಿ ಸೀಟ್ ಬ್ಲಾಕಿಂಗ್ ಬಗ್ಗೆ ಎಫ್ಐಆರ್ ದಾಖಲಾಗಿತ್ತು.