ಜ 9: ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ, ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ 2016ರಲ್ಲಿ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಪರಿಷ್ಕರಿಸಿದೆ.
ರಾಷ್ಟ್ರಗೀತೆ ಕಡ್ಡಾಯ ವಿಷಯಕ್ಕೆ ಸಂಬಂದಿಸಿ ವಿಧಿ, ವಿಧಾನ ರೂಪಿಸಲು 12 ಸದಸ್ಯರನ್ನೊಳಗೊಂಡ ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಹಿಂದಿನ ಆದೇಶವನ್ನು ಪರಿಷ್ಕರಿಸಿತು.
ಹೀಗಾಗಿ ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವ ವಿಚಾರದಲ್ಲಿ ಯುಟರ್ನ್ ತೆಗೆದುಕೊಂದಿರುವ ಕೇಂದ್ರ ಸರ್ಕಾರ ಕಡ್ಡಾಯ ಆದೇಶವನ್ನು ವಾಪಾಸ್ ಪಡೆಯುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿ ಗೆದ್ದಂತಾಗಿದೆ.