ಮಂಗಳೂರು, ನ 10 (DaijiworldNews/SM): ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸುತ್ತದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, 15 ವಿಧಾನಸಭಾ ಕ್ಷೇತ್ರಗಳ ಪೈಕಿ 15ರಲ್ಲೂ ಬಿಜೆಪಿಯೇ ಜಯಗಳಿಸಲಿದೆ ಎಂದರು. ಈಗಾಗಲೇ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಎಲ್ಲಾ ರೀತಿಯ ತಯಾರಿಯನ್ನು ತಳಮಟ್ಟದಿಂದ ಮಾಡಲಾಗಿದೆ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ರಾಜ್ಯಪಾಲರು ಬಿಜೆಪಿಗೆ ಸರಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಫಡ್ನವಿಸ್ ಅವರು ಬಹುಮತವನ್ನು ಸಾಬೀತು ಪಡಿಸುತ್ತಾರೆ. ಬಿಜೆಪಿ ಹಾಗೂ ಶಿವಸೇನೆ ಮಧ್ಯೆ ಯಾವುದೇ ಸಮಸ್ಯೆಗಳಿಲ್ಲ. ಸಮಸ್ಯೆಗಳೇನಾದರು ಇದ್ದರೆ ಅವೆಲ್ಲವನ್ನೂ ಹೈಕಮಾಂಡ್ ಬಗೆಹರಿಸುತ್ತದೆ ಎಂದು ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.