ಮಂಗಳೂರು, ನ 12 (Daijiworld News/MSP): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ 39.50 ಶೇ. ಮತದಾನವಾಗಿದೆ.
ಮಂಗಳವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾದ ಮತದಾನ ನಿಧಾನಗತಿಯಲ್ಲಿ ಆರಂಭಗೊಂಡಿತ್ತು. 39 ನೇ ವಾರ್ಡ್ ವಾರ್ಡ್ ನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಬಿಟ್ಟರೆ, ಬೇರೆಲ್ಲೆಡೆ ಶಾಂತವಾಗಿ ಮತದಾನ ನಡೆಯುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಬೆಳಗ್ಗೆಯೇ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಮತದಾನ ಮಾಡಿದರು. ಮಿಲಾಗ್ರಿಸ್ ಶಾಲೆಯ 40ನೇ ಬೂತ್ ನಲ್ಲಿ ಸುಮಾರು 20ಕ್ಕೂ ಅಧಿಕ ಮಂಗಳಮುಖಿಯರು ಮತದಾನ ಮಾಡಿ ಸಂಭ್ರಮಿಸಿದರು.