ಮಂಗಳೂರು , ನ.12(Daijiworld News/SS): ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಮತದಾರ ಪ್ರಭುಗಳು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಆದರೆ ಈ ನಡುವೆ ಶಾಸಕ ವೇದವ್ಯಾಸ್ ಕಾಮತ್ ಇಲಾಖೆಯ ಬೇಜಾವಾಬ್ದಾರಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಶಾಸಕರ ಮತ ಚೀಟಿಯಲ್ಲಿ ತಂದೆಯ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ. ವೇದವ್ಯಾಸ್ ಕಾಮತ್ ತಂದೆಯ ಹೆಸರು ವಾಮನ ಕಾಮತ್. ಆದರೆ ತಂದೆಯ ಹೆಸರಿನ ಮುಂದೆ ಚುನಾವಣಾ ಆಯೋಗ ಪ್ರಶ್ನಾರ್ಥಕ ಚಿಹ್ನೆಯನ್ನು ಹಾಕಿದ್ದಾರೆ. ಹೀಗಾಗಿ ಇಲಾಖೆಯ ಬೇಜಾವಾಬ್ದಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ 39.50 ಶೇ. ಮತದಾನವಾಗಿದೆ.