ಕಡಬ, ನ 27 (Daijiworld News/MSP): ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ನ.26ರ ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ನ.27ರ ಬುಧವಾರ ಮೃತಪಟ್ಟ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಶ್ರೀಧರ ಗೌಡ ಎಂಬವರ ಪುತ್ರಿ ಕು| ಸವಿತಾ ಎಂದು ಗುರುತಿಸಲಾಗಿದೆ. ಮಂಗಳವಾರದಂದು ವಿಷ ಸೇವಿಸಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.