ಉಡುಪಿ, ಡಿ ೧೨ (DaijiworldNews/SM): ರಾಜ್ಯದ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ವೈದ್ಯರ ಕೊರತೆಯಾಗದಂತೆ , ನೇಮಕಾತಿಗಳನ್ನು ಮಾಡುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ಇವರ ಸಹಯೋಗದಲ್ಲಿ ಮುನಿಯಾಲುನಲ್ಲಿ 1.78 ಕೋಟಿ ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಎಲ್ಲಡೆ ಪರಿಸರ ಕಲುಷಿತಗೊಳ್ಳುತ್ತಿರುವುದರಿಂದ ವಿವಿಧ ರೀತಿಯ ಹೊಸ ರೋಗಗಳು ಕಂಡು ಬರುತ್ತಿದ್ದು, ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ರೋಗಗಳು ಬಾರದಂತೆ ಯಾವ ರೀತಿಯ ಮುಂಜಾಗ್ರತಾ ಕ್ರಮ ವಹಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎನ್ನುವ ಕುರಿತು ಅರಿವು ಮೂಡಿಸಬೇಕು ಎಂದು ಸಚಿವರು ತಿಳಿಸಿದರು.
ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.