ಸುಳ್ಯ, ಡಿ 12 (DaijiworldNews/SM): ಕಲ್ಮಕಾರು ಗ್ರಾಮದ ನಿವಾಸಿ ಮಹೇಶ್ ಕೆ.ಪಿ.(47) ರವಿವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರಿಗೆ ಈ ಹಿಂದೆ ಹೃದಯದ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಆದರೆ ರವಿವಾರ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಹೇಶ್ ಅವರು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಕಲ್ಮಕಾರು ಬಿಜೆಪಿ ಶಕ್ತಿ ಕೇಂದ್ರದ ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು ಹಿಂದಿನ ವರ್ಷ ಹಾಗೂ ಇತ್ತೀಚೆಗೆ ಕಲ್ಮಕಾರು ಭಾಗದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಸಂತ್ರಸ್ಥರ ಸ್ಥಳಾಂತರ ಇತ್ಯಾದಿ ಕೆಲಸಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದರು.