ಮಂಗಳೂರು, ಜ 18: ಕ್ರೈಸ್ತ ಸಮುದಾಯಕ್ಕೆ ಒಳಿತಾಗುವ ದೃಷ್ಠಿಯಿಂದ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಮುಂದಿನ ದಿನಗಳಲ್ಲಿ ಕ್ರೈಸ್ತ್ ಅಭಿವೃದ್ಧಿ ನಿಗಮವಾಗಿ ಪರಿವರ್ತನೆ ಮಾಡಬೇಕು ಎಂದು ಐವನ್ ಡಿಸೋಜಾ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 2018-19 ನೇ ಸಾಲಿನ ಬಜಟ್ ನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ ಒದಗಿಸಬೇಕು. ಈ ಮೂಲಕ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
2017 – 18 ನೇ ಸಾಲಿನಲ್ಲಿ 175 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು. ಆದರೆ ಒದಗಿಸಲಾದ 175 ಕೋಟಿಗೆ ಮೇಲಾಗಿ 300 ಕೋಟಿಗೂ ಮಿಕ್ಕಿ ಫಲಾನುಭವಿಗಳಿಗೆ ಅರ್ಹರಿರುವ ಅರ್ಜಿದಾರರು ಅರ್ಜಿ ಸಲ್ಲಿದ್ದರು. ಅನುದಾನದ ಕೊರತೆಯಿಂದ ಅರ್ಹ ಫಲಾನುಭವಿಗಳಿಗೆ ಹಣ ಒದಗಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
2011 ನೇ ಸಾಲಿನಲ್ಲಿ 50 ಕೋಟಿ ರೂಪಾಯಿ ಅನುದಾನದಲ್ಲಿ ಪ್ರಾರಂಭಗೊಂಡ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ನಿಗಮವನ್ನಾಗಿ ಘೋಷಿಸಬೇಕು. ಇದನ್ನು ಕ್ರೈಸ್ತ ಅಭಿವೃದ್ಧಿ ಪರಿಷತ್ ತೀರ್ಮಾನಿಸಿದೆ. ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ 500 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಹೇಳಿದ್ದಾರೆ.