ಪುತ್ತೂರು, ಡಿ 23 (Daijiworld News/MB) : ನಾಲ್ಕು ವರ್ಷಗಳ ಹಿಮದೆ ಯುವತಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿಯನ್ನು ಪುತ್ತೂರು ನ್ಯಾಯಾಲಯವು ದೋಷ ಮುಕ್ತಗೊಳಿಸಿದೆ.
2015ರ ಜ.29ರಂದು ಸಂಜೆ ಬೈಕ್ನಲ್ಲಿ ಬಂದ ರಫೀಕ್ ಎಂಬಾತ ಪುಣಪ್ಪಾಡಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮಾನಭಂಗ ಮಾಡಲು ಯತ್ನಿಸಿದ್ದ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಈ ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಮಾಡಿ, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿದೆ.
ಆರೋಪಿ ಪರ ನ್ಯಾಯಾವಾದಿ ನೂರುದ್ದೀನ್ ಸಾಲ್ಮರ ವಾದಿಸಿದ್ದರು.