ಮಣಿಪಾಲ, ಡಿ 26 (Daijiworld News/PY) : ಉಸಿರಾಟದ ತೊಂದರೆಯಿಂದ ಡಿ.21ರಂದು ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಪೂಜ್ಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎಂದು ಈ ಹಿಂದೆ ವೈದ್ಯರ ತಂಡ ತಿಳಿಸಿತ್ತು.
ಆದರೆ, ಪೇಜಾವರ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು ನಿನ್ನೆಯಿಂದ ಅವರ ಆರೋಗ್ಯದ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ ಎಂದು ವೈದ್ಯರ ತಂಡ ಇಂದು ತಿಳಿಸಿದ್ದಾರೆ.
ಶ್ರೀಗಳು ನ್ಯೂಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಇಂದಿಗೆ ಆರು ದಿನಗಳಾಗಿವೆ, ದಾಖಲಾದಾಗಿನಿಂದಲೂ ಶ್ರೀಗಳಿಗೆ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ಇನ್ನೂ ಕೃತಕ ಉಸಿರಾಟದ ವ್ಯವಸ್ಥೆಯಲ್ಲೇ ಇದ್ದಾರೆ, ಶ್ವಾಸಕೋಶಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿವೆ, ಶ್ರೀಗಳ ಆರೋಗ್ಯದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂದು ಆಸ್ಪತ್ರೆಯ ಪ್ರಕಟಣೆಗಳು ತಿಳಿಸಿವೆ