ಉಡುಪಿ, ಡಿ 27 (DaijiworldNews/SM): ಜಿಲ್ಲೆಯ ಎಲ್ಲಾ ಬೀಚ್ಗಳನ್ನು ಬ್ಲೂಫ್ಲಾಗ್ ಮಾನ್ಯತೆ ಪಡೆಯುವ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಜನೆ ಇದ್ದು, ಈ ನಿಟ್ಟಿನಲ್ಲಿ ಸರ್ವೇ ಕಾರ್ಯಗಳನ್ನು ನಡೆಸಲಾಗಿದೆ ಎಂದ ಜಿಲ್ಲಾಧಿಕಾರಿ, ಸೋಮೇಶ್ವರ ಬೀಚ್ ಹಾಗೂ ಮರವಂತೆ ಬೀಚ್ಗಳ ಅಭಿವೃದ್ದಿಗೆ ತಲಾ 5 ಕೋಟಿ ರೂಪಾಯಿ ಮಂಜೂರಾಗಿದೆ ಹಾಗೂ ಜನವರಿಯಲ್ಲಿ ಕಾಪು ಲೈಟ್ ಉತ್ಸವ ಆಚರಿಸಲು ಸಿದ್ದತೆಗಳಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.
ಅವರು ಶುಕ್ರವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂಡಳಿಗಳು ಉಡುಪಿ ಇವರ ಸಹಯೋಗದಲ್ಲಿ ಡಿಸೆಂಬರ್ 29 ರಿಂದ 31ರ ವರೆಗೆ ಮಲ್ಪೆ ಬೀಚ್ನಲ್ಲಿ, ಮಲ್ಪೆ ಬೀಚ್ ಉತ್ಸವ-2019ನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.
ಡಿಸೆಂಬರ್ 29ರಂದು ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಸದರಿ ದಿನದಂದು ಮಕ್ಕಳಿಗಾಗಿ ಚಿತ್ರಕಲೆ ಸ್ಫರ್ಧೆ, ಪುರುಷರಿಗಾಗಿ ವಾಲಿಬಾಲ್ ಹಾಗೂ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ, ಮರಳು ಶಿಲ್ಪ, ಗಾಳಿಪಟ ಪ್ರದರ್ಶನ, ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆ, ಅಂಜಲಿ ವಿಲ್ಸನ್ ಡ್ಯಾನ್ಸ್ ಟ್ರೂಪ್, ಶಿರಸಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ಧೇಶದಿಂದಾಗಿ ಉಡುಪಿ ಜಿಲ್ಲೆಯ ಹೆಸರಾಂತ ತಂಡಗಳಿಂದ ಸಾಂಸ್ಕತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.