ಮಂಗಳೂರು, ಡಿ 28 (Daijiworld News/MSP): ಚಾಲಕ ನಿಯಂತ್ರಣ ತಪ್ಪಿದ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆತ್ತಿಕಲ್ ನಲ್ಲಿ ಡಿ.28 ರ ಶನಿವಾರ ನಡೆದಿದೆ. ಅಪಘಾತದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಶ್ರೀರಾಮ್ ಟ್ರಾವೆಲ್ಸ್ ಗೆ ಸೇರಿದ ಬಸ್ ಇದಾಗಿದ್ದು ಮಂಗಳೂರಿನಿಂದ ಮೂಡಬಿದಿರೆಯ ಕಡೆ ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಅತಿವೇಗದಿಂದ ಬರುತ್ತಿದ್ದ ಬಸ್ ಕೆತ್ತಿಕಲ್ ಬಳಿಯ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್ ನಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ.