ಉಡುಪಿ, ಡಿ 29 (Daijiworld News/MB) : ಗಂಭೀರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಸ್ವಾಮೀಜಿ ಅವರನ್ನು ಇಂದು ಬೆಳಿಗ್ಗೆ 6:55ರ ಸುಮಾರಿಗೆ ಉಡುಪಿ ಪೇಜಾವರ ಮಠಕ್ಕೆ ಸ್ಥಳಾಂತರ ಮಾಡಲಾಗಿದೆ.
ಪೇಜಾವರ ಶ್ರೀಗಳು ಕಳೆದ 8 ದಿನಗಳಿಂದ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದು ವೈದ್ಯರು ಮೆದುಳು ನಿಷ್ಕ್ರಿಯವಾಗಿದ್ದು ಜೀವ ರಕ್ಷಕ ವ್ಯವಸ್ಥೆ ಅಳವಡಿಸಲಾಗಿದೆ. ಈಗ ಅವರನ್ನು ಉಡುಪಿಯ ಪೇಜಾವರ ಮಠಕ್ಕೆ ಸ್ಥಳಾಂತರ ಮಾಡಲಾಗಿದೆ.
ಪೇಜಾವರ ಸ್ವಾಮಿಗಳ ಆರೋಗ್ಯ ಚೇತರಿಕೆ ಆಗುವ ಯಾವುದೇ ಲಕ್ಷಣಗಳು ಕಾಣದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಪೇಜಾವರ ಮಠಕ್ಕೆ ಸ್ಥಳಾಂತರ ಮಾಡಲಾಗಿದೆ. ಶ್ರೀಗಳ ಆಸೆಯೂ ಇದೇ ಆಗಿತ್ತು ಎಂದು ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿಗೆ ಬಂದಿದ್ದು ಪೇಜಾವರ ಶ್ರೀಗಳ ಆರೋಗ್ಯ ಇನ್ನಷ್ಟು ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ಇಂದೂ ಕೂಡ ಉಡುಪಿಯಲ್ಲೇ ಇರುವುದಾಗಿ ತಿಳಿಸಿದ್ದಾರೆ.