ಉಪ್ಪಿನಂಗಡಿ, ಡಿ 29(Daijiworld News/PY) : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಜೀಪು ಹಾಗೂ ಕಂಟೈನರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಜೀಪ್ ಚಾಲಕ ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತ ಜೀಪ್ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೈನರ್ಗೆ ಡಿಕ್ಕಿ ಸಂಭವಿಸಿದ ಪರಿಣಾಮ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕ ಮೃತಪಟ್ಟಿದ್ದಾನೆ, ಇಬ್ಬರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.