ಮಂಗಳೂರು, ಡಿ 30 (Daijiworld News/ MB ) : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಿದ ಆರೋಪದಲ್ಲಿ ಹಲವರ ವಿರುದ್ಧ ಮಂಗಳೂರು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲು ಮಾಡಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳು ಹರಿದಾಡುತ್ತಿದ್ದು, ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಸೈಬರ್ ಪೊಲೀಸರಿಗೆ ತನಿಖೆ ಆದೇಶ ಮಾಡಿದ್ದರು. ಈ ತನಿಖೆ ನಡೆಸಿದ ಸೈಬರ್ ಪೊಲೀಸರು ಹಲವರಿಗೆ ತನಿಖೆಗೆ ಬರುವಂತೆ ನೋಟಿಸ್ ಕಳುಹಿಸಲಾಗಿದೆ.
ಕೆಲವು ಸಾಮಾಜಿಕ ಜಾಲತಾಣದ ಗ್ರೂಪ್ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡುತ್ತಿದ್ದರಿಂದ ಅಂತಹ ಗ್ರೂಪ್ ಅಡ್ಮಿನ್ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಮದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿ ನೋಟಿಸ್ ಕಳುಹಿಸಲಾಗಿದೆ.
ಈ ಪ್ರಾಥಮಿಕ ತನಿಖೆಯಲ್ಲಿ ಕೆಲವು ಆರೋಪಿಗಳ ಸುಳಿವು ದೊರೆತಿದ್ದು ಇನ್ನೂ ಹಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಗಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಯಾರೂ ಕೂಡಾ ಸುಳ್ಳು ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡಬಾರದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಎಚ್ಚರಿಕೆ ನೀಡಿದ್ದಾರೆ.