ಮಂಗಳೂರು, ಡಿ 30 (Daijiworld News/ MB) : ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಗೋಲಿಬಾರ್ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟ್ರೇಟ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಆರಂಭಿಸಿದ್ದಾರೆ.
ಸೋಮವಾರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಆ ಬಳಿಕ ನೆಲ್ಲಿಕಾಯಿ ರಸ್ತೆ, ಸ್ಟೇಟ್ ಬ್ಯಾಂಕ್ ಪರಿಸರ ಹಾಗೂ ಸಿಟಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.