ಉಡುಪಿ, ಜ 01 (Daijiworld News/MB) : ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷರರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ನೂತನ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಎಸ್ಪಿಯಾಗಿದ್ದ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ.
ನೂತನ ಎಸ್ಪಿಯವರು 2015ರ ಬ್ಯಾಂಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ನಿಶಾ ಜೇಮ್ಸ್ ಅವರು 2018ರ ಫೆಬ್ರವರಿ 23ರಂದು ಉಡುಪಿ ಎಸ್ಪಿಯಾಗಿದ್ದು ಮಹಿಳೆಯರ ಸುರಕ್ಷತೆಯ ನಿಟ್ಟಿನಲ್ಲಿ ಅಬ್ಬಕ್ಕ ಪಡೆಯನ್ನು ರಚಿಸಿದ್ದಾರೆ.
ಹಾಗೆಯೇ ಕಾರ್ಕಳ ಉಪವುಭಾಗದ ಪೊಲೀಸ್ ಅಧೀಕ್ಷಕ ಪಿ.ಕೃಷ್ಣಕಾಂತ್ ಅವರನ್ನು ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾಗಿ ನಿಯುಕ್ತಿಗೊಳಿಸಿ ಆದೇಶ ನೀಡಲಾಗಿದೆ.