ಕಡಬ, ಜ 03 (DaijiworldNews/SM): ಶಾಲೆಯಿಂದ ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ದೋಳ್ಪಾಡಿ ನಿವಾಸಿ ಲಿಂಗಪ್ಪ ಪೂಜಾರಿ ಎಂಬಾತ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿ ಅದೇ ದಾರಿಯಿಂದಾಗಿ ಬರುತ್ತಿದ್ದುದನ್ನು ಕಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.