ಭಟ್ಕಳ ಸೆ16: ಇಲ್ಲಿನ ಸೆ,14 ರಂದು ಮಳಿಗೆ ತೆರವು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಾಪಾರಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ರಾಮಚಂದ್ರ ನಾಗಪ್ಪ ನಾಯ್ಕ್ ಮೃತ ವ್ಯಕ್ತಿ. ಪುರಸಭೆ ಅಧಿಕಾರಿಗಳು ಅಂಗಡಿ ಮಳಿಗೆಗಳನ್ನು ತೆರವುಗೊಳಿಸಲು ಮುಂದಾದಾಗ ವಿರೋಧಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೆ.14ರಂದು ಪುರಸಭೆ ನಡೆಸಿದ ಅಂಗಡಿ ಮಳಿಗೆ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಆಕ್ರೋಶಿತರು ಪುರಸಭೆ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ, ಆತ್ಮಹತ್ಯೆ ಯತ್ನ ಸೇರಿದಂತೆ ಒಟ್ಟು ನಾಲ್ಕು ವಿವಿಧ ಪ್ರಕರಣಗಳು ಭಟ್ಕಳ ನಗರ ಠಾಣೆಯಲ್ಲಿ ದಾಖಲಾಗಿವೆ...ಪೊಲೀಸ್ ಸಿಬ್ಬಂದಿ ಗೌತಮ್, ಪುರಸಭೆಯ ಕಿರಿಯ ಇಂಜಿನಿಯರ್ ಉಮೇಶ್ ಮಡಿವಾಳ, ನಗರ ಠಾಣೆಯ ಪಿ.ಎಸ್.ಐ ಅಣ್ಣಪ್ಪ ಮೊಗೇರ್ ಮತ್ತು ರಾಮಚಂದ್ರ ನಾಯ್ಕ್ ಬೇರೆ ಬೇರೆ ಕೇಸು ಭಟ್ಕಳ ಠಾಣೆಯಲ್ಲಿ ದಾಖಲಿಸಿದ್ದಾರೆ...