ಉಡುಪಿ, ಜ 7 (Daijiworld News/MB) : ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಕೋಟೆ ಗ್ರಾಮದ ಸಾಕಂಬಾಡಿ ಎಂಬಲ್ಲಿ ನಡೆದಿದೆ.
ಪೀಟರ್ ಡಿಸಿಲ್ವಾ ಎಂಬವರ ಪುತ್ರ ಆತೀಶ್ ಡಿಸಿಲ್ವಾ (23) ಆತ್ಮಹತ್ಯೆ ಮಾಡಿದ ಕೊಂಡ ಯುವಕ.
ಯುವಕನು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಸುಮಾರು 5 ತಿಂಗಳ ಹಿಂದೆ ಮಣಿಪಾಲದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಕಳೆದ ನವೆಂಬರ್ನಲ್ಲಿ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಯುವಕ ಆನಂತರ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಚಿಂತೆಗೀಡದ್ದಂತೆ ಕಂಡು ಬರುತ್ತಿದ್ದ ಎಂದು ಮೃತ ಯುವಕ ನ ಅಣ್ಣ ದೂರಿನಲ್ಲಿ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಆತ ಮಲಗಿದ್ದು ಸೋಮವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂದು ಈವರೆಗೂ ತಿಳಿದುಬಂದಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.