ಮಂಗಳೂರು, ಜ 7 (Daijiworld News/MB) : ಕೇಂದ್ರ ಸರಕಾರದ ಕಾರ್ಮಿಕ ಕಾನೂನುಗಳ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಬುಧವಾರ ಭಾರತ್ ಬಂದ್ಗೆ ಕರೆ ನೀಡಿದ್ದು ದೇಶವ್ಯಾಪ್ತಿ ಮುಷ್ಕರಕ್ಕೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದೆ. ಆದರೆ ದಕ್ಷಿಣ ಕನ್ನಡದಲ್ಲಿ ಬಂದ್ನ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆಯಾಗಿದೆ.
ಈ ಬಂದ್ ಹಿನ್ನಲೆಯಲ್ಲಿ ಮಾತನಾಡಿದ ಎಡಪಕ್ಷಗಳ ಮುಖಂಡರು, "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲದ ಹಿನ್ನಲೆಯಲ್ಲಿ ಬಂದ್ಗೆ ಕರೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ದೊರಕದ ಹಿನ್ನಲೆಯಲ್ಲಿ ನಗರದ ಪುರಭವನದ ಆವರಣದಲ್ಲಿ ನಾಳೆ ಬೆಳಿಗ್ಗೆ ೧೦:೩೦ರಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಸಂಘಟನೆಗಳು ತೀರ್ಮಾನ ಮಾಡಿದೆ.
ದೇಶವ್ಯಾಪ್ತಿ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆ ನೀಡುರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು)ದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದ್ದು ನಾಳೆ ನಡೆಯುವ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಬಿಸಿಯೂಟ ನೌಕಕರು ಕೂಡಾ ಭಾಗವಹಿಸಲಿದ್ದಾರೆ.
ಕೆಎಸ್ಆರ್ಟಿಸಿ, ಖಾಸಗೀ ಬಸ್, ರಿಕ್ಷಾದ ಕೆಲವು ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಆದರೆ ವಾಹನ ಸಂಚಾರ ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಮಾಹಿತಿ ತೀರ್ಮಾನ ಮಾಡಿಲ್ಲ. ಹಾಗಾಗಿ ನಾಳೆಯೂ ಎಂದಿನಂತೆ ವಾಹನಗಳು ಸಂಚಾರ ಮಾಡುವ ಸಾಧ್ಯತೆಗಳು ಇದೆ. ಆದರೆ ರಾಷ್ಟ್ರವ್ಯಾಪ್ತಿಯಾಗಿ ಬಂದ್ ನಡೆಯುವ ಹಿನ್ನಲೆಯಲ್ಲಿ ಬ್ಯಾಂಕ್ಗಳು ಬಂದ್ ಆಗುವ ಸಾಧ್ಯೆತೆಯಿದೆ.