ಕಾಸರಗೋಡು, ಜ 07 (DaijiworldNews/SM): ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರ ಕೇರಳದಲ್ಲಿ ಬಂದ್ ಆಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ.
ಬಿಜೆಪಿ ಬೆಂಬಲಿತ ಬಿ ಎಂ ಎಸ್ ಹೊರತು ಪಡಿಸಿ ಉಳಿದೆಲ್ಲಾ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಖಾಸಗಿ, ಕೆ ಎಸ್ ಆರ್ ಟಿ ಸಿ ಬಸ್, ಆಟೋ, ಟ್ಯಾಕ್ಸಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಬ್ಯಾಂಕ್, ವಿಮಾ ಕಂಪೆನಿ , ಸಾರ್ವಜನಿಕ ವಲಯ ಸಂಸ್ಥೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಇನ್ನು ವರ್ತಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಕೇರಳ ಸಂಪೂರ್ಣ ಸ್ಥಬ್ದ ಗೊಳ್ಳಲಿದೆ.
ಕೇರಳದಲ್ಲಿ ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಮಧ್ಯರಾತ್ರಿ ತನಕ 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದ ಹಿನ್ನಲೆಯಲ್ಲಿ ಹಲವೆಡೆ ಪ್ರತಿಭಟನಾ ಮೆರವಣಿಗಳನ್ನು ಹಮ್ಮಿಕೊಳ್ಳಲಾಗಿದೆ.