ಉಡುಪಿ, ಫೆ 01 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ವಾದ ಮಂಡಿಸಲು ವಿಶೇಷ ಅಭಿಯೋಜಕರಾಗಿ ಸರಕಾರ ನೇಮಕಗೊಳಿಸಿರುವ ವಕೀಲ ಎಂ. ಶಾಂತರಾಮಶೆಟ್ಟಿ ಅವರ ನೇಮಕ ರದ್ದುಕೋರಿ ಆರೋಪಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ , ಆದೇಶ ರದ್ದುಗೊಳಿಸಲು ನಿರಾಕರಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವಾಗಿದೆ. ವಿಶೇಷ ಅಬಿಯೋಜಕ ಶಾಂತರಾಮ್ ಶೆಟ್ಟಿ ಮುಂದುವರಿಕೆ ವಿರುದ್ದ ಆರೋಪಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ರಾಜ್ಯ ಸರ್ಕಾರ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಅಭಿಯೋಜಕರಾಗಿ ಶಾಂತರಾಮ್ ಅವರನ್ನು ನೇಮಿಸಿತ್ತು. ಇದೀಗ ತಡೆಯಾಜ್ಞೆ ತೆರವುಗೊಳಿಸುವಂತೆ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಆಕ್ಷೇಪಗಳಿದ್ದರೆ ಮುಂದಿನ ಒಂದು ವಾರದೊಳಗೆ ಆಕ್ಷೇಪವನ್ನು ಸರ್ಕಾರಕ್ಕೆ ಸಲ್ಲಿಸಬಹುದು.ಸರ್ಕಾರ ಅದನ್ನು ಪರಿಗಣಿಸಬಹುದು ಎಂದು ಆದೇಶದಲ್ಲಿ ತಿಳಿಸಿದ್ದು ಕೋರ್ಟ್ ಗೆ ಆಕ್ಷೇಪ ಸಲ್ಲಿಕೆ ಅವಕಾಶವನ್ನು ಸಂಪೂರ್ಣವಾಗಿ ಕೈ ಬಿಟ್ಟಿದೆ.