ಬೆಂಗಳೂರು, ಫೆ 3: ಕೊಣಾಜೆಯ ಪಜೀರು ಗ್ರಾಮದ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಕಾವ್ಯಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾವ್ಯಶ್ರೀ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ, ಒಂದು ಲಕ್ಷ. ರೂ ಬಾಂಡ್ ಮತ್ತು ಶ್ಯೂರಿಟಿ ಸಹಿತ ಕೆಲ ಷರತ್ತುಗಳನ್ನು ವಿಧಿಸಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.