ನವದೆಹಲಿ, ಫೆ 12: ಮಹಾ ಶಿವರಾತ್ರಿ ಹಬ್ಬದ ದಿನ ದೇಶದಲ್ಲಿರುವ ಶಿವನ ದೇಗುಲಗಳಲ್ಲಿ ಉಗ್ರ ಸಂಘಟನೆಗಳು ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಮಹಾಶಿವರಾತ್ರಿ ಹಿನ್ನಲೆಯಲ್ಲಿ ಶಿವನ ದೇಗುಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ಹಿನ್ನಲೆಯಲ್ಲಿ ದೇಗುಲಗಳ ಮೇಲೆ ಕೆಂಗಣ್ಣು ಬೀರಿರುವ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆಂದು ಹೇಳಿದ್ದಾರೆ.
ಮಹಾಶಿವರಾತ್ರಿಯು ಹಿಂದೂಗಳ ಹಬ್ಬಗಳಲ್ಲಿ ಪ್ರಮುಖವಾದ ಹಬ್ಬವಾಗಿದೆ. ಮಹಾ ಶಿವರಾತ್ರಿ ಹಬ್ಬವನ್ನು ಮಾಘ ಮಾಸದ ಬಹುಳ/ಕೃಷ್ಣ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸಲಾಗುತ್ತದೆ. ಹೀಗಾಗಿ ಜ್ಯೋತಿರ್ಲಿಂಗ ದೇಗುಲಗಳ ಮೆಲೆ ಉಗ್ರರ ಕಣ್ಣಿದ್ದು, ಮಹಾರಾಷ್ಟ್ರ, ಪಂಜಾಬ್, ಹರಿಯಾಣ, ಜಮ್ಮು, ಉತ್ತರಪ್ರದೇಶ, ರಾಜಸ್ತಾನ, ಗುಜರಾತ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿರುವ ಶಿವನ ದೇಗುಲಗಳನ್ನೂಉಗ್ರರು, ಗುರಿಯಾಗಿರಿಸಿಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಮಹಾರಾಷ್ಟ್ರ ಪೊಲೀಸರು ಭಾರತದ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾಗಿರುವ ನಾಶಿಕ್ ತ್ರಿಂಬಕೇಶ್ವರ ದೇಗುಲದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.