ಮಂಗಳೂರು, ಫೆ 13: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರದಲ್ಲಿ ಅಭಿವೃದ್ಧಿಯ ಜೊತೆಗೆ ವಾಹನ ಅಪಘಾತಗಳು ಹೆಚ್ಚಾಗುತ್ತಿದೆ.
ಇದೀಗ ಅಪಘಾತದಲ್ಲಿ ಮಂಗಳೂರು ರಾಜ್ಯದಲ್ಲಿಯೇ 12ನೇ ಸ್ಥಾನದಲ್ಲಿರುವುದು ಆತಂಕವನ್ನು ಹೆಚ್ಚಿಸಿದೆ. ಇಲ್ಲಿ ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದು ಸಂಚಾರ ನಿರ್ವಹಣೆ ಮೇಲೆ ಒತ್ತಡ ಹೇರುತ್ತಿದ್ದು, ವಾಹನಗಳ ಅಪಘಾತ ತಡೆಯಲು ಇಲಾಖೆಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಅಪಘಾತದ ಪ್ರಮಾಣ ಇಳಿಕೆಯಾಗಿಲ್ಲ ಎಂಬುದನ್ನು ಅಂಕಿ ಅಂಶ ಬಹಿರಂಗಪಡಿಸಿದೆ.
ಕಳೆದ ಮೂರು ವರ್ಷಗಳಲ್ಲಿ ನಗರದಲ್ಲಿ ಬರೋಬ್ಬರಿ 2,185 ಅಪಘಾತಗಳಾಗಿದ್ದು, ಇದರಲ್ಲಿ 313 ಮಾರಣಾಂತಿಕ ಅಪಘಾತವಾದರೆ, 1,872 ಮಾರಣಾಂತಿಕವಲ್ಲದ ಅಪಘಾತಗಳು ನಡೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.