ಉಡುಪಿ, ಫೆ 17: ಕಳೆದ ಕೆಲ ದಿನಗಳಿಂದ ಆರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿರುವ ಪೇಜಾವರ ಸ್ವಾಮೀಜಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ಮಾಡಿ, ಆರೋಗ್ಯವನ್ನು ವಿಚಾರಿಸಿದರು.
ಕಳೆದ ತಿಂಗಳು ನಡೆದ ಪರ್ಯಾಯ ಕಾರ್ಯಕ್ರಮದ ಬಳಿಕ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಬೆನ್ನು ಮೂಳೆ ಸಮಸ್ಯೆಯಿಂದ ಬಳಲುತ್ತಿರುವ ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀಗಳು ವೈದ್ಯರ ಸಲಹೆ ಮೇರೆಗೆ ಇದೀಗ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಮೋದ್ ಮಧ್ವರಾಜ್ ಮಠಕ್ಕೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.