ಪುತ್ತೂರು ಸೆ18:ಇಲ್ಲಿನ ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತ್ ಸಂಪ್ಯ ಠಾಣೆ ಉಪನಿರೀಕ್ಷಕ ಬಿ.ಎ.ಖಾದರ್ ಅವರನ್ನು ನಿಂದಿಸಿ ಸೆ15 ರಂದು ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿದೆ. ಪುತ್ತೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಜಗದೀಶ್ ಕಾರಂತ್ ,ಎಸ್ ಐ ಬಿ.ಎ.ಖಾದರ್ ಸಂಘಟನೆ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಅಧಿಕಾರಿ ವಿರುದ್ದ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಮತ್ತು ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ವಿಡಿಯೋದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿದ್ದು, ಭಾಷಣದ ವಿರುದ್ದ ಅಸಮಾಧಾನ ವ್ಯಕ್ತವಾಗಿದೆ.