ಬೆಂಗಳೂರು, ಫೆ : ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳಾದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸೇರಿ ಏಳು ಜನ ಆರೋಪಿಗಳನ್ನು ಮಾ.7ರ ವರೆಗೆ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ ಕೇಂದ್ರೀಯ ಪರಪ್ಪನ ಅಗ್ರಹಾರದ ಜೈಲು ಸೇರಿರುವ ಮೊಹಮ್ಮದ್ ನಲಪಾಡ್'ಗೆ ವಿಚಾರಣಾಧೀನ ಕೈದಿ 1756 ಸಂಖ್ಯೆಯನ್ನು ನೀಡಲಾಗಿದೆ ಎಂದು ಕಾರಾಗೃಹದ ಅಧಿಕಾರಿಗಳು ನೀಡಿದ್ದಾರೆ. ಅಲ್ಲದೆ ವಿಶೇಷ ಭದ್ರತಾ ವಿಭಾಗದ ಸೆಲ್ ನಲ್ಲಿ ಆತನನ್ನು ಬಂಧಿಸಡಲಾಗಿದೆ ಎಂದು ಮಾಧ್ಯಮ ಮೂಲಗಳು ಮಾಹಿತಿ ನೀಡಿವೆ.
ಎರಡು ದಿನಗಳ ಕಾಲ ನೀಡಿದ್ದ ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಬುಧವಾರ ಸಂಜೆ ಪೊಲೀಸರು ೮ ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತು. ನಂತರ ಏಳು ಮಂದಿ ಆರೋಪಿಗಳನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಯಿತು.
ಪ್ರಕರಣ ಸಂಬಂಧ ವಿದ್ವತ್ ತಂದೆ ಲೋಕನಾಥನ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದಿದ್ದು, ಪ್ರಕರಣದ ಸಂಬಂಧ ವಕೀಲ ಶ್ಯಾಮ್'ಸುಂದರ್ ಎಂ.ಎಸ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮನವಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.