ಮಂಗಳೂರು, ಫೆ 26 : ನಗರದ ಕೊಡಿಯಾಲ್ ಗುತ್ತು ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಪಾರ್ಟ್ ಮೆಂಟ್ ಫ್ಲಾಟ್ ವೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಫ್ಲಾಟ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಗರದ ಅಡ್ಯಾರ್ ಪದವು ನಿವಾಸಿ ರಿಯಾಜ್ ಅಹಮ್ಮದ್ (35) ಹಾಗೂ ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ.
ಆರೋಪಿಗಳ ಪೈಕಿ ಮಹಿಳೆಯು ಫ್ಲಾಟ್ ನಲ್ಲಿ ವಾಸ್ತವ್ಯವಿದ್ದು, ಯುವತಿಯರನ್ನು ಈ ಫ್ಲಾಟ್ ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು. ಪೊಲೀಸ್ ದಾಳಿ ಸಂದರ್ಭದಲ್ಲಿ ಫ್ಲಾಟ್ ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಿಸಲಾಗಿದೆ.