ಸುಳ್ಯ, ಫೆ 27: ಸುಳ್ಯದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಬರ್ಬರ ಕೊಲೆಯನ್ನು ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕ್ರೂರವಾಗಿ ಖಂಡಿಸುತ್ತಿದ್ದು, ಪ್ರೀತಿ ಪ್ರೇಮದ ಹೆಸರಿನಲ್ಲಿ ದೌರ್ಜನ್ಯಕ್ಕೆ ಬಲಿಯಾಗಿರುವುದು ಕರಾವಳಿಯ ಹಿಂದೂ ಸಮಾಜಕ್ಕೆ ಆತಂಕ ಸೃಷ್ಟಿಯಾಗಿದೆ. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿ ಕಾರ್ತಿಕ್ಗೆ ಗಲ್ಲುಶಿಕ್ಷೆ ವಿಧಿಸಬೇಕು ಮತ್ತು ಮೃತ ಅಕ್ಷತಾಳ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ ಪರಿಹಾರ ನೀಡಬೇಕು ಎಂದು ಭಜರಂಗದಳ ಜಿಲ್ಲಾ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕರಾವಳಿಯಲ್ಲಿ ಹಿಂದೂ ಯುವತಿಯರ ಅತ್ಯಾಚಾರ, ಕೊಲೆ, ಲವ್ ಜಿಹಾದ್ ಮುಖಂತರ ವಿದ್ಯಾರ್ಥಿನಿಯರ ಮತಾಂತರ ನಡೆಯುತ್ತಿದೆ. ಡ್ರಗ್ಸ್, ಗಾಂಜಾ ಸೇವನೆಯ ಮೂಲಕ ಹಿಂದೂ ಯುವತಿಯವರ ಬಾಳನ್ನು ನಾಶ ಮಾಡುವ ವ್ಯವಸ್ಥಿತವಾದ ಷಡ್ಯಂತ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದರು.