ಬಂಟ್ವಾಳ, ಮಾ 2: ಮಹಿಳೆಯರು ಮನೆಯ ಜವಬ್ದಾರಿಗಳನ್ನು ನಿಭಾಯಿಸಿ ಮಹಿಳಾ ಸಂಘಟನೆಗಳಲ್ಲಿ ಪಾಲ್ಗೊಳ್ಳಿ ಮತ್ತು ಶಿಕ್ಷಣಕ್ಕೆ ಹೆಚ್ಚು ಗಮನಕೊಡಿ ಎಂದು ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಬಿ.ಸಿರೋಡಿನ ತಾ.ಪಂ. ಎಸ್ ಜಿ ಆರ್ ಎಸ್ ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ಥಾಯಿ ಸಮಿತಿ ಅಧ್ಯಕ್ಷೆ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸರಕಾರ ಮಹಿಳೆಯರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡುತ್ತಿದೆ. ಮಹಿಳೆಯರು ಒಗ್ಗಟ್ಟಿನಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ಮನೆಯ ಜವಬ್ದಾರಿಗಳನ್ನು ನಿಭಾಯಿಸಿ ಮಹಿಳಾ ಸಂಘಟನೆಗಳಲ್ಲಿ ಪಾಲ್ಗೊಳ್ಳಿ. ಶಿಕ್ಷಣಕ್ಕೆ ಹೆಚ್ಚು ಗಮನ ಕೊಡಿ. ಮಹಿಳೆಗೆ ವಿವಿಧ ಯೋಜನೆಗಳ ಮೂಲಕ ಸಂಪಾದನೆಯನ್ನು ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಸಂಜೀವ ಪೂಜಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಪುಷ್ಪಲತಾ, ತಾ.ಪಂ. ಸದಸ್ಯೆ ಮಲ್ಲಿಕಾ ಶೆಟ್ಟಿ, ಇ.ಒ ರಾಜಣ್ಣ, ಒಕ್ಕೂಟದ ಉಪಾದ್ಯಕ್ಷೆ ರಂಜನಿ, ಕೋಶಾಧಿಕಾರಿ ಶಕುಂತಲಾ ಮತ್ತಿತರರು ಉಪಸ್ಥಿತರಿದ್ದರು.