ಹುಬ್ಬಳ್ಳಿ, ಮಾ 04 : ಈಶಾನ್ಯ ಭಾರತದ ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ರಿಸಲ್ಟ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ತೆರನಾದ ಪ್ರಭಾವ ಬೀರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಶಾನ್ಯ ಭಾರತದ ರಾಜಕೀಯದ ವಿಧವೇ ಬೇರೆಯಾಗಿದೆ, ಕರ್ನಾಟಕದ ರಾಜಕೀಯವೇ ಬೇರೆಯಾಗಿದೆ, ಹೀಗಾಗಿ ಈಶಾನ್ಯ ಭಾರತದ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಕೆ ಮಾಡಬೇಕೆಂದು ಒತ್ತಾಯಿಸಿದರು. ವಿದ್ಯುನ್ಮಾನ ಮತಯಂತ್ರಗಳಲ್ಲಿ ನಂಬಿಕೆ ಇದೆ. ಆದರೆ, ರಾಜ್ಯದಲ್ಲಿ ನಡೆಯಲಿರುವ ಆಸೆಂಬ್ಲಿ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಸಬೇಕೆಂದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.