ಬೆಳ್ತಂಗಡಿ, ಮಾ 07: ಗ್ರಾಮ ಪಂಚಾಯತಿ ಸದಸ್ಯನೋರ್ವನ ಮನೆಗೆ ತೆರಳಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಲಕ್ಷ್ಮೀ ಅಲಿಯಾಸ್ ಮೇರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಇಲ್ಲಿನ ಗ್ರಾ.ಪಂ ಬಿಜೆಪಿ ಸದಸ್ಯ, ಓಬಯ್ಯ ಗೌಡ ಮನೆಗೆ ಬಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಒಂದನೇ ವಾರ್ಡ್ ನ ಮಹಿಳೆ ಎರಡನೇ ವಾರ್ಡ್ ಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಮಾಹಿತಿ ತಿಳಿದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.