ಬೆಂಗಳೂರು, ಮಾ 07 : ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಗೆ ಸದ್ಯ ಜಾಮೀನು ಸಿಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಲಪಾಡ್ ನ್ಯಾಯಾಂಗ ಬಂಧನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಬುಧವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ಕೋರ್ಟ್ ಮಾರ್ಚ್ 21 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರಿಂದಾಗಿ ಇನ್ನೂ 14 ದಿನ ನಲಪಾಡ್ಗೆ ಜೈಲೇ ಗತಿ ಆಗಿದೆ. ಇನ್ನು ಖುದ್ದು ಆರೋಪಿಯನ್ನು ನ್ಯಾಯಾಲಯ ಕರೆದುಕೊಂಡು ಬಾರದೇ , ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಪೊಲೀಸರು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಿದ್ದರು.
ಸಾಕ್ಷ್ಯ ನಾಶ ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದ ಮಂಡಿಸಿದ ವಿದ್ವತ್ ಪರ ವಕೀಲರು, ನಲಪಾಡ್ ಗೆ ಜಾಮೀನು ನೀಡದಂತೆ ವಾದ ಮಂಡಿಸಿದ್ದರು.