ನವದೆಹಲಿ, ಸೆ19: ಮುಂದಿನ ದಿನಗಳಲ್ಲಿ ತೈಲ ದರ ಇಳಿಕೆಯಾಗಲಿದ್ದು, ವಾಹನ ಸವಾರರಿಗೆ ಹರ್ಷ ತರಲಿದೆ. ಮುಂದಿನ ತಿಂಗಳಲ್ಲಿ ಬರುವ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಮತ್ತು ಡಿಸೇಲ್ ದರ ಪರಿಷ್ಕರಣೆಗೊಳ್ಳಲಿದ್ದು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಪರಿಷ್ಕರಣೆಗೆ ಒಲವು ತೋರುವ ಸಾಧ್ಯತೆ ಇದೆ. ಕಚ್ಚಾ ತೈಲದ ದರ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆಯಾಗಿದೆ. ಆದರೆ ಮುಂದಿನ ತಿಂಗಳಲ್ಲಿ ಪರಿಸ್ಥಿತಿ ಸುಧಾರಿಸಲಿದ್ದು, ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.