ಮಾ , 14: ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇದೀಗ ಪ್ರಕಟವಾದ ಫಲಿತಾಂಶದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಕ್ಷೇತ್ರ ಗೋರಖ್ಪುರ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿನಿಧಿಸುತ್ತಿದ್ದ ಫೂಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿಯ ಪ್ರತಿಷ್ಠೆಯ ಕಣವಾದ ಗೋರಖ್ಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಪೇಂದ್ರ ದತ್ ಶುಕ್ಲಾ ಅವರನ್ನು ಎಸ್ಪಿ ಅಭ್ಯರ್ಥಿ ಪ್ರತಾಪ್ ಸಿಂಗ್ ಪಟೇಲ್ ಅವರು 20 ನೇ ಸುತ್ತಿನಲ್ಲಿ 30,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಸತತವಾಗಿ ಹಲವು ಬಾರಿ ಗೆಲುವು ಕಂಡಿರುವ ಆದಿತ್ಯನಾಥ್ ಅವರ ಕ್ಷೇತ್ರದಲ್ಲಿ ಈ ಸೋಲು ಬಿಜೆಪಿಗೆ ತೀವ್ರ ಮುಜುಗರಕ್ಕೆ ಉಂಟು ಮಾಡಿದೆ.
ಬಿಎಸ್ಪಿ ತನ್ನ ಅಭ್ಯರ್ಥಿಯನ್ನು ಈ ಭಾರೀ ಕಣಕ್ಕೆ ಇಳಿಸಿದೆ, ಮತವಿಭಜನೆಯಾಗಲು ಬಿಡದ ಕಾರಣ ಎಸ್ಪಿ ಅಭ್ಯರ್ಥಿ ಗೆಲುವು ಸಾಧಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಕಾರಣ ಬಿಜೆಪಿಯ ತನ್ನ ಭದ್ರಕೋಟೆಯಲ್ಲಿಯೇ ಸೋಲು ಕಾಣಬೇಕಾಯಿತು.
ಇನ್ನು ಬಿಹಾರದ ಅರಾರಿಯಾ ಲೋಕಸಭಾ ಕ್ಷೇತ್ರದಲ್ಲೂ ಆರ್ಜೆಡಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.