ಮಂಗಳೂರು, ಮಾ 15 : ಮಂಗಳೂರು ವಿಮಾನ ನಿಲ್ದಾಣದಿಂದ ಬುಧವಾರದಂದು 31 ಪ್ರಯಾಣಿಕರನ್ನು ಹೊತ್ತು ಹೈದರಾಬಾದ್ಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೂಡಲೇ ವಿಮಾಣವನ್ನು ರದ್ದುಪಡಿಸಿದ ಕಾರಣ 31 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಪ್ರಯಾಣಿಕರು ಬೋರ್ಡಿಂಗ್ ಆಗಿ ರನ್ವೇಯಿಂದ ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ದೊಡ್ಡ ಮಟ್ಟದ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬುಧವಾರ ಬೆಳಿಗ್ಗೆ 8.50೦ಕ್ಕೆ ಸ್ಪೈಸ್ ಜೆಟ್ನ ಬೊಂಬಾರ್ಡಿಯರ್ ವಿಮಾನ ಹೊರಡಬೇಕಾಗಿತ್ತು. ಹೊಗೆ ಕಾಣಿಸಿಕೊಂಡ ತಕ್ಷಣ ವಿಮಾಣ ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನಿಸಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿತು. ಬಳಿಕ ಪ್ರಯಾಣಿಕರನ್ನು ಇಳಿಸಿ ಪಾರು ಮಾಡಲಾಯಿತು. ಕಳೆದ ಐದು ತಿಂಗಳ ಅಂತರದಲ್ಲಿ ಈ ರೀತಿಯ ತಾಂತ್ರಿಕ ದೋಷ ಕಾಣಿಸಿರುವುದು ಇದು ಮೂರನೇ ಬಾರಿಯಾಗಿದೆ.
.