ಮಂಗಳೂರು, ಮಾ 17: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಿನಿಂದಾಗಿ ಮಲಗಿದ್ದು, ಇನ್ನು ಏಳುವುದು ಕಷ್ಟ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಆಗಿರುವ ಬದಲಾವಣೆ ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಗೂ ದಿಕ್ಸೂಚಿಯಾಗಲಿದೆ. ಕೆಲದಿನಗಳ ಹಿಂದೆ ದೇಶದಾದ್ಯಂತ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದ್ದು, ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಜನತೆ ತೋರಿಸಿದ್ದಾರೆ ಎಂದು ತಿಳಿಸಿದರು.
ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಿನಿಂದಾಗಿ ಮಲಗಿದ್ದು, ಅವರಿನ್ನು ಏಳುವುದು ಕಷ್ಟ. ಬಿಜೆಪಿ ಪಕ್ಷದವರು ಪರ್ಯಾಯವಾಗಿ ಬೇರೆ ಅವರನ್ನು ಹುಡುಕಬೇಕು ಎಂದು ಹೇಳಿದರು.