ಮಾ,21: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಮಾರ್ಚ್ 26ರಂದು ಆರಂಭವಾಗಲಿದ್ದು ಎಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ತನ್ವೀರ್ ಸೇಠ್ ಹೇಳುತ್ತಿದ್ದಂತೆ
ಇತ್ತ ಕಡೆ ವೇತನ ತಾರತಮ್ಯ ಸರಿಪಡಿಸಲು ಆಗ್ರಹಿಸಿ ಗುರುವಾರದಿಂದ ಪಿಯು ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ನಾವು ವೇತನ ತಾರತಮ್ಯ ಸರಿಪಡಿಸುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದೇವೆ. ಅದಕ್ಕಾಗಿ ಸಾಕಷ್ಟು ಹೋರಾಟ ಕೂಡಾ ಮಾಡಿದ್ದೇವೆ. ಈಗ ನಮಗೂ ಸಾಕಾಗಿದೆ. ಇಲಾಖೆಯಲ್ಲಿ ಹಣವಿದ್ದರೂ ವೇತನ ಹೆಚ್ಚಳವಾಗಿಲ್ಲ. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಪಿಯು ಉಪನ್ಯಾಸಕರ ಸಂಘದ ಸಭೆಯಲ್ಲಿ ಅಂತಿಮವಾಗಿ ಮೌಲ್ಯಮಾಪನ ಬಹಿಷ್ಕಾರ ಹಾಕಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.ಈ ಹಿನ್ನಲೆಯಲ್ಲಿ ಸರ್ಕಾರವೂ ಉಪನ್ಯಾಸಕರ ಬೇಡಿಕೆ ಈಡೇರಿಸುವವರೆಗೆ ಮೌಲ್ಯ ಮಾಪನ ಬಹಿಷ್ಕರಿಸುವುದಾಗಿ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.