ಚಿಕ್ಕಮಗಳೂರು, ಮಾ 23: ಸಾಮಾಜಿಕ ಜಾಲತಾಣಗಳ ಬಳಕೆ ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದರಿಂದ ಜನರು ಖಾಸಗಿ ಜೀವನವನ್ನು ಕಳೆದುಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಹೇಳಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ಖಾಸಗಿ ಜೀವನವನ್ನು ಕಳೆದುಕೊಂಡಿದ್ದಾರೆ. ಮಾತ್ರವಲ್ಲ ಈ ಮೂಲಕ ಬದುಕಿನ ಎಲ್ಲಾ ವಿಚಾರಗಳು ಸಾರ್ವಜನಿಕವಾಗಿ ಬಹಿರಂಗವಾಗುತ್ತಿದೆ ಎಂದು ಹೇಳಿದ್ದಾರೆ.
ವಾಟ್ಸಪ್, ಫೇಸ್ಬುಕ್, ಟ್ವಿಟ್ಟರ್ ಇತ್ಯಾದಿಗಳಲ್ಲಿ ನಾವು ನಮ್ಮ ಖಾಸಗಿ ಬದುಕಿನ ವಿಚಾರಗಳನ್ನು ಶೇರ್ ಮಾಡುವುದರಿಂದ ಅದು ನಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಜೀವನ, ಬದುಕಿನ ವಿಚಾರ ಹಂಚಿಕೊಳ್ಳಬಾರದು ಎಂದು ತಿಳಿಸಿದ್ದಾರೆ.
ಎಸ್ಪಿ ಅಣ್ಣಾಮಲೈ ಕಳೆದ ಕೆಲ ತಿಂಗಳುಗಳ ಹಿಂದೆ ಸಭೆಯೊಂದರಲ್ಲಿ ಮಾತನಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.