ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳು ಪೋಸ್ಟ್ ಕಾರ್ಡ್ ಅಭಿಯಾನ ನಡೆಸುವ ಮೂಲಕ, ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ರಾಮನವಮಿ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಪೋಸ್ಟ್ ಕಾರ್ಡ್ ಅಭಿಯಾನ ಮೂಲಕ ಗಾಢನಿದ್ರೆಯಲ್ಲಿರುವ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕೆಲಸ ಆಗಬೇಕು. ಶ್ರೀರಾಮನ ಹೆಸರು ಹೇಳಿಕೊಂಡು ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಗಳು, ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿಲ್ಲ ಎಂದು ಮುತಾಲಿಕ್ ಕಿಡಿಕಾರಿದರು.