ಬಂಟ್ವಾಳ, ಮಾ 28 : ಮನೆಯೊಂದರಿಂದ ನಾಲ್ಕೂವರೆ ಲಕ್ಷ ರೂಪಾಯಿ ನಗದು ಮತ್ತು 6.30 ಲಕ್ಷ ಮೌಲ್ಯದ 350 ಗ್ರಾಂ ಚಿನ್ನಾಭರಣ ಕಳವುಗೈದಿರುವ ಘಟನೆ ಮಾ, 27 ರ ಮಂಗಳವಾರ ತಡರಾತ್ರಿ ಬಂಟ್ವಾಳದ ಸಿದ್ದಕಟ್ಟೆಯ ಸಂಗಬೆಟ್ಟುವಿನ ಕೆರೆ ಬಳಿ ನಡೆದಿದೆ. ಸಿದ್ದಕಟ್ಟೆ ಕೆರೆಬೈಲ್ನ ಹಸನ್ ಅಲಿ ಎನ್ನುವವರ ಮನೆಯಲ್ಲಿ ಕಳವು ಪ್ರಕರಣ ನಡೆದಿದ್ದು ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿ ಇಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ. ಮನೆಮಂದಿ ಗಾಢ ನಿದ್ರೆಯಲ್ಲಿದ್ದ ಸಂದರ್ಭ ನಿನ್ನೆ ತಡರಾತ್ರಿ ಈ ಒಂದು ಘಟನೆ ನಡೆದಿದೆ. ಪರಿಚಿತರೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಪ್ರಸನ್ನ ಕುಮಾರ್, ಪ್ರೊಬೇಷನರಿ ಎಸ್ಪಿ ಪ್ರಸನ್ನ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ಮತ್ತು ಶ್ನಾನದಳದ ಸಿಬ್ಬಂದಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.