ಉಡುಪಿ, ಮಾ 30: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡುವುದಿಲ್ಲ ಮತ್ತು ನನ್ನ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನನ್ನ ಮಾತೃ ಪಕ್ಷ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡುವುದಿಲ್ಲ. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ. ನಾನು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ ಎಂದು ಹೇಳಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ ಯಾರೇ ಪ್ರತಿಸ್ಪರ್ಧಿ ಆದರೂ ನಾನು ಚಿಂತೆ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷದ ಅತಿದೊಡ್ಡ ಗೆಲುವು ನನ್ನದಾಗುತ್ತೆ. ಮಾತ್ರವಲ್ಲ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಾನು ಯಾವತ್ತೂ ಮೋಸ ಮಾಡಲ್ಲ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಬಳಿಕ ಕೇಂದ್ರದಲ್ಲಿ ರಾಹುಲ್ ಸರ್ಕಾರ ಬರುವುದು ಖಚಿತ. ಮಾತ್ರವಲ್ಲ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.