ಏ,05: 20 ವರ್ಷಗಳ ಹಿಂದಿನ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ದೋಷಿ ಎಂದು ಗುರುವಾರ ಜೋಧ್ಪುರ್ ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ಇತರ ಆರೋಪಿಗಳಾದ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೆಂದ್ರೆ ಮತ್ತು ನೀಲಂ ಕೋಠಾರಿ ಅವರನ್ನು ಖುಲಾಸೆಗೊಳಿಸಿದೆ. 1998 ರ ಆಕ್ಟೋಬರ್ 2 ರಂದು ಜೋಧ್ಪುರ್ ಹೊರವಲಯದಲ್ಲಿ ಕಂಕಣಿ ಎಂಬಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದ ವೇಳೆ 2 ಕೃಷ್ಣ ಮೃಗಗಳನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51ರ ಅಡಿ ಸಲ್ಮಾನ್ ಖಾನ್ ಅವರನ್ನು ಮುಖ್ಯ ನ್ಯಾಯಮೂರ್ತಿ ದೇವ್ ಕುಮಾರ್ ಖಾತ್ರಿ ಅವರು ದೋಷಿ ಎಂದು ತೀರ್ಪು ನೀಡಿದ್ದಾರೆ. ಎಲ್ಲಾ ಆರೋಪಿಗಳು ಇಂದು ಜೋಧ್ಪುರ ನ್ಯಾಯಾಲಯದಲ್ಲಿ ಖುದ್ದು ಹಾಜರಾಗಿದ್ದರು.