ಮಂಗಳೂರು ಏ.5: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅದ್ಯಪಾಡಿಯ ಅಲಿಯಾಸ್ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮುಖ್ತಾರ್ ಎಂದು ಗುರುತಿಸಲಾಗಿದೆ. ಈತನು ಕುಖ್ಯಾತ ದನ ಕಳ್ಳನಾಗಿದ್ದು, ಈತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಅಜೆಕಾರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಕಳ್ಳಿ ಹುಳಿಯ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಕೊಡ್ಲಿ ಪೇಟೆ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹೀಗೆ ಒಟ್ಟು 13 ಪ್ರಕರಣ ದಾಖಲಾಗಿದೆ.
ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೂಡು ಮಾರ್ನಾಡು ಎಂಬಲ್ಲಿನ ಮನೆಯ ಹಟ್ಟಿಯಲ್ಲಿ ಕಟ್ಟಿದ್ದ ೨ ದನಗಳನ್ನು ಕಾರಿನಲ್ಲಿ ಕಳವು ಮಾಡಿಕೊಂಡು ಹೋಗುತ್ತಿದ್ದುದ್ದನ್ನು ತಡೆಯಲು ಬಂದ ಸ್ಥಳೀಯರಿಗೆ ತಲವಾರು ತೋರಿಸಿ ಬೆದರಿಕೆ ಹಾಕಿ ಕಳ್ಳತನ ಮಾಡಿದ ದನದೊಂದಿಗೆ ಪರಾರಿಯಾಗಿದ್ದರು. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟ ಶಾಂತರಾಮ್,ಪಿಎಸ್ಐಗಳಾದ ಶ್ಯಾಮ್ ಸುಂದರ್,ಹೆಚ್.ಡಿ ಕಬ್ಬಾಳ್ ರಾಜ್,ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.