ಮಂಗಳೂರು, , ಜು.12 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ವ್ಯಾಪಕವಾಗಿ ಏರಿಕೆಯಾಗುತ್ತಲ್ಲಿದ್ದು ಭಾನುವಾರ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ ಎರಡು ದಿನಗಳ ಹಿಂದೆ ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಭಾನುವಾರ ಅದರ ವರದಿ ಪಾಸಿಟಿವ್ ಬಂದಿದೆ.
ಪ್ರಸ್ತುತ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.