ಕಾರ್ಕಳ, ಏ 17: ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವಿಶೇಷ ಆಹ್ವಾನಿತ ಸದಸ್ಯ ಆರೀಫ್ ಕಲ್ಲೊಟ್ಟೆ ಬಿಜೆಪಿ ಸದಸ್ಯತ್ವಕ್ಕೆ ಹಾಗೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕಳೆದ 20 ವರ್ಷಗಳಿಂದ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದಾರೆ. ಇತ್ತೀಚೆನ ದಿನಗಳಲ್ಲಿ ಪಕ್ಷದ ಬೆಳವಣಿಗೆಯಲ್ಲಿ ತನ್ನನ್ನು ಮೂಲೆಗುಂಪಾಗಿ ಮಾಡಿದ್ದಾರೆ. ಶಾಸಕ ಸುನೀಲ್ಕುಮಾರ್ ವಿವಾದಿತ ಹೇಳಿಕೆ ನೀಡುತ್ತಿದ್ದು, ಕೇವಲ ಹಿಂದುಗಳು ಮಾತ್ರ ಸಾಕು ಎಂಬ ದಾಟಿಯಲ್ಲಿ ಮಾತನಾಡುತ್ತಾ ಅಲ್ಪಸಂಖ್ಯಾತ ಸಮುದಾಯದರ ಭಾವನೆಗೆ ಘಾಸಿ ಉಂಟು ಮಾಡುತ್ತಿದ್ದಾರೆ. ಈ ಎಲ್ಲಾ ಕಾರಣವನ್ನು ಮುಂದಿಟ್ಟು ತನ್ನ ನಿರ್ಧಾರ ಕೈಗೊಂಡಿರುವುದಾಗಿ ಆರೀಫ್ ಕಲ್ಲೊಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.