ಏ,19: ಫೇಕ್ ನ್ಯೂಸ್ ಯನ್ನು ಹಬ್ಬಿಸಲು ಮೋದಿ ಇರೋವಾಗ ಬಿಜೆಪಿಗೆ ವಾಟ್ಸ್ಆ್ಯಪ್ ಮತ್ತು ಟ್ವಿಟರ್ ಯಾಕೆ ಎಂದು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ.
ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಮಾತುಗಳುನ್ನು ಹೇಳಿರುವ ಅವರು ಪ್ರಧಾನಿಯವರೇ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ವಾಟ್ಸ್ಆ್ಯಪ್ ಬಳಸುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿಯನ್ನು ಎದುರಿಸಲು ನಿಮ್ಮ ಯೋಜನೆಗಳೇನು? ಎಂಬ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಪ್ರಧಾನಿಯವರೇ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ.
ಫೇಕ್ ನ್ಯೂಸ್ ನಿಂದಾಗಿ ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿಯಂಥಾ ರಾಜಕಾರಣಿಗಳು ಗೆದ್ದಿರುವುದು ನಮಗೆ ಗೊತ್ತಿದೆ. ಹೀಗಾಗಿ ಸುಳ್ಳು ಸುದ್ದಿಗಳನ್ನು ತಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ. ಬಿಜೆಪಿ ಎಲ್ಲ ಚುನಾವಣೆಗಳಲ್ಲಿಯೂ ಸುಳ್ಳು ಸುದ್ದಿ ಹಬ್ಬಿಸಿದೆ. ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಹೇಳಿಕೆಯೊಂದನ್ನು ನೀಡಿದ್ದರು. ಅಹಮದ್ ಪಟೇಲ್ ವಿರುದ್ಧ ಪಿಸುಮಾತಿನ ಅಪಪ್ರಚಾರ ಮಾಡಿದ್ದರೂ ಅವರು ಗೆದ್ದು ಮುಖ್ಯಮಂತ್ರಿ ಗದ್ದುಗೆಯೇರಿದ್ದರು. ಸುಳ್ಳುಸುದ್ದಿಗಳಿಂದ ಏನೆಲ್ಲಾ ಆಗುತ್ತಿದೆ ಎಂಬುದು ನಮಗೆ ತಿಳಿದಿದೆ ಎಂದಿದ್ದಾರೆ.